ಕರ್ನಾಟಕದಲ್ಲಿ ಜೂನ್ 18ಕ್ಕೆ ಪಿಯುಸಿ, ಜೂನ್ 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ
ಕರ್ನಾಟಕದಲ್ಲಿ ಜೂನ್ 18ಕ್ಕೆ ಪಿಯುಸಿ, ಜೂನ್ 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ
ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದಲ್ಲಿ ಲಾಕ್ಡೌನ್ ಘೋಷಿಸಿದ್ದರಿಂದ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಸ್ಎಸ್ಎಲ್ಸಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಈಗಾಗಲೇ ಚಂದನ ವಾಹಿನಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಆರಂಭಿಸಲಾಗಿದೆ. ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನ ಅಂತರವನ್ನು ನೀಡಲಾಗಿದೆ. ಸದ್ಯದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ತಿಂಗಳು ಮುಂಚಿತವಾಗಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜುಲೈ 4ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯಲಿದ್ದು, ಮೌಲ್ಯಮಾಪನಕ್ಕೆ 1 ತಿಂಗಳು ಬೇಕಾಗುತ್ತದೆ. ನಂತರ ಪೂರಕ ಪರೀಕ್ಷೆ ನಡೆಸಲಾಗುವುದು. ಶಾಲೆಗಳ ಪ್ರಾರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಡೈಸ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ, ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.
Comments
Post a Comment