ರಾಜಕೀಯಕ್ಕೆ `ಕರ್ನಾಟಕ ಸಿಗಂ' ಅಣ್ಣಾಮಲೈ ಪ್ರವೇಶ : 2021 ರ ಚುನಾವಣೆಯಲ್ಲಿ ಸ್ಪರ್ಧೆ

ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ‘ ಅಣ್ಣಾಮಲೈ ಎಂಟ್ರಿ!




ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ, ಅಪರಾಧಿಗಳಲ್ಲಿ ಜೀವ ಭಯ ಹುಟ್ಟಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡುವುದು ಖಚಿತವಾಗಿದೆ.

ಹೌದು ವರ್ಷದ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪೊಲೀಸ್ ಸೇವೆಯಿಂದ ವಿಮುಕ್ತಗೊಂಡ ಸಿಂಗಂ ಖ್ಯಾತಿಯ ಅಣ್ಣಾಮಲೈ ರಾಜಕೀಯಕ್ಕೆ ಪ್ರವೇಶಿಸುತ್ತಾರೆಂಬ ಮಾತುಗಳು ಜೋರಾಗಿ ಕೇಳಿ ಬರುತ್ತಿತ್ತು. ಹೀಗಿದ್ದರೂ ಮಾಜಿ ಪೊಲೀಸ್ ಅಧಿಕಾರಿ ಈ ಮಾತುಗಳನ್ನು ಅಲ್ಲಗಳೆದಿದ್ದರು. ಆದರೀಗ ಅವರು ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಮುಂಬರುವ 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವು ಕುರಿತು ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.


ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಣ್ಣಾಮಲೈ ಭಾನುವಾರ(ಮೇ.17) ಫೇಸ್​​ಬುಕ್​​ ಲೈವ್​​ನಲ್ಲಿ ಮಾತಾಡುವ ಸಂದರ್ಭದಲ್ಲಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ತಮಿಳುನಾಡಿನ ತನ್ನ ಟ್ವ
ತವರೂರಿನಲ್ಲಿ ಮುಂದಿನ ಚುನಾವಣೆಗೆ ಬೇಕಾದ ಅಗತ್ಯ ಕೆಲಸಗಳನ್ನು ಆರಂಭಿಸುವುದಾಗಿಯೂ ತಿಳಿಸಿದರು.

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಿಸ್​ ಯೂ ಕರ್ನಾಟಕ: ‘ಮಿಸ್​​ ಯೂ ಕರ್ನಾಟಕ’ ಎನ್ನುವ ಮೂಲಕ ತಮ್ಮ ಮಾತುಗಳನ್ನಾರಂಭಿಸಿದ ಅಣ್ಣಾಮಲೈ,ತಾನು ಪೊಲೀಸ್​​​ ಸೇವೆಯಲ್ಲಿದ್ದಾಗ ಕನ್ನಡಿಗರು ಬೆಟ್ಟದಷ್ಟು ಪ್ರೀತಿ ಕೊಟ್ಟಿದ್ದಾರೆ. ಆ ನಿಮ್ಮ ಪ್ರೀತಿಗೆ ಅಭಾರಿಯಾಗಿದ್ದೇನೆ. ನನಗೆ ಜನರೊಂದಿಗೆ ಇದ್ದು ರಾಜಕೀಯ ಸುಧಾರಣೆ ಮಾಡುವ ಆಲೋಚನೆ ಇದೆ.  ಆದ್ದರಿಂದ ಕರ್ನಾಟಕ ಪೊಲೀಸ್​​ ಇಲಾಖೆಗೆ ರಾಜೀನಾಮೆ ನೀಡಿ ನನ್ನೂರಿಗೆ ಬಂದಿದ್ದೇನೆ. ಜನರ ಸೇವೆ ಮಾಡಲಿದ್ದೇನೆ. ಕರ್ನಾಟಕದಲ್ಲಿ 10 ವರ್ಷ ಪೊಲೀಸ್​​ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಕುಟುಂಬದ ಜತೆ ಸಮಯ ಕಳೆಯುವುದು, ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡಬೇಕು, ಜನರ ಸೇವೆ ಮಾಡಬೇಕು, ರಾಜಕೀಯ ವ್ಯವಸ್ಥೆ ಬದಲಾಯಿಸಬೇಕು, ಪೊಲೀಸ್​​ ಅಧಿಕಾರಿಗಳಿಗೆ ಉತ್ತಮ ವಾತಾವರಣ ಕಲ್ಪಿಸಬೇಕು ಎಂಬುವುದು ನನ್ನಾಸೆ ಎಂದು ಹೇಳಿಕೊಂಡಿದ್ದಾರೆ.





Comments

Popular posts from this blog

Auto Clicker Mod Apk 2020 (fully unlocked)