ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಲಾಖೆ ನೀಡಿದೆ ಮಹತ್ವದ ಸೂಚನೆ..?
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಲಾಖೆ ನೀಡಿದೆ ಮಹತ್ವದ ಸೂಚನೆ..?
COVID19 ಲಾಕ್ ಡೌನ್ ನಿಂದ ಬಾಕಿ ಉಳಿದಿದ್ದ ಪಿಯುಸಿಯ ಇಂಗ್ಲೀಷ್ ಭಾಷೆ ಪರೀಕ್ಷೆಯನ್ನು ನಡೆಸಲು ಸರಕಾರ ಸಿದ್ಧತೆಯನ್ನು ನಡೆಸುತ್ತಿದೆ.
ಸೆಕೆಂಡ್ ಪಿಯು ವಿದ್ಯಾರ್ಥಿಗಳು ತಾವು ಯಾವ ಜಿಲ್ಲೆಯಲ್ಲಿ ಉಳಿದುಕೊಂಡಿದ್ದಾರೋ ಅವರು ಬಯಸಿದರೆ, ಅದೇ ಜಿಲ್ಲೆಯಿಂದಲೇ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ತೀರ್ಮಾನ ತೆಗೆದುಕೊಂಡಿದೆ.
ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಸಂಕೇತ ಸಂಖ್ಯೆ, ವಿದ್ಯಾರ್ಥಿಯ ಹೆಸರು, ಸ್ಟೂಡೆಂಟ್ ನಂಬರ್, ರಿಜಿಸ್ಟರ್ ನಂಬರ್, ಮೊಬೈಲ್ ನಂಬರ್, ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಹೆಸರು, ಪರೀಕ್ಷೆ ಬರೆದ ಪರೀಕ್ಷಾ ಕೇಂದ್ರದ ಕುರಿತು ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.
Comments
Post a Comment