SSLC ಪರೀಕ್ಷೆ ರದ್ದು ಮಾಡಲು ಕೋರಿ ಹೈಕೋರ್ಟ್‌ಗೆ ಮನವಿ 2020
SSLC ಪರೀಕ್ಷೆ ರದ್ದು ಮಾಡಲು ಕೋರಿ ಹೈಕೋರ್ಟ್‌ಗೆ ಮನವಿ..! ರದ್ದು ಸಾಧ್ಯತೆ..?
ಜೂ. 25ರಿಂದ ಪರೀಕ್ಷೆ ನಡೆಸಲು ಸರಕಾರ ತೀರ್ಮಾನಿಸಿದ್ದು, ಕೊರೋನಾ ಸೋಂಕು ಹರಡುತ್ತಿರುವ ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮತ್ತವರ ಕುಟುಂಬ ವರ್ಗಕ್ಕೂ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆ ಇದೇ ಜೂನ್ 25ರಿಂದ ಎಸ್‌ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಕೈಗೊಂಡಿರುವ ನಿರ್ಧಾರ ಕೈಬಿಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರಿನ ಎಂ. ಲೋಕೇಶ್ ಸೇರಿ ಮೂವರು ಅರ್ಜಿ ಸಲ್ಲಿಸಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅರ್ಹರು ಎಂಬುದಾಗಿ ಘೋಷಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಸರಕಾರ, ಶಿಕ್ಷಣ ಇಲಾಖೆ, ಎಸ್‌ಎಸ್‌ಎಲ್‌ಸಿ ಮಂಡಳಿಯನ್ನು ಪ್ರತಿವಾದಿ ಮಾಡಲಾಗಿದ್ದು, ಅರ್ಜಿ ಇನ್ನೂ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.
ಜೂ. 25ರಿಂದ ಪರೀಕ್ಷೆ ನಡೆಸಲು ಸರಕಾರ ತೀರ್ಮಾನಿಸಿದ್ದು, ಕೊರೋನಾ ಸೋಂಕು ಹರಡುತ್ತಿರುವ ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮತ್ತವರ ಕುಟುಂಬ ವರ್ಗಕ್ಕೂ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರ, ಪಂಜಾಬ್ ಮತ್ತು ಮಧ್ಯಪ್ರದೇಶ ಸರಕಾರಗಳು ಈಗಾಗಲೇ 10ನೇ ತರಗತಿ ಪರೀಕ್ಷೆ ರದ್ದುಪಡಿಸಿರುವುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಜೂ.25ರಿಂದ ನಡೆಸಲು ರಾಜ್ಯ ಸರಕಾರ ಮೇ 18ರಂದು ವೇಳಾಪಟ್ಟಿ ಪ್ರಕಟಿಸಿದೆ. ಒಟ್ಟು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕಿದೆ.
Comments
Post a Comment